ಎಸ್.ಎಸ್.ಎಲ್.ಸಿ ಫಲಿತಾಂಶ ದಿನಾಂಕ ಇನ್ನೂ ನಿಗಧಿಯಾಗಿಲ್ಲ : ಸುರೇಶ್ ಕುಮಾರ್.

194
firstsuddi

ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಇಂದು ಪ್ರಕಟವಾಗುತ್ತದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಫಲಿತಾಂಶದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಕಳೆದ ತಿಂಗಳು ಸುರೇಶ್ ಕುಮಾರ್ ಅವರು ಎಸ್.ಎಸ್.ಎಲ್.ಸಿ ಪಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.
ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಆಗಸ್ಟ್ 7ರೊಳಗೆ ಘೋಷಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಿತ್ತು. ಜೂನ್ 25 ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.