ಬೆಂಗಳೂರು : 2019ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿಯು ವಿಧ್ಯಾರ್ಥಿನಿಯರದ್ದೇ ಮೇಲುಗೈ, ಸೃಜನಾ(625/625) ಹಾಗೂ ನಾಗಾಂಜಲಿ(625/625) ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. 11 ವಿಧ್ಯಾರ್ಥಿಗಳು 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಾರಿ 8,23,468 ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇಕಡಾ 73.70 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.










