ಏಕಕಾಲಕ್ಕೆ ರಾಜ್ಯದ 9 ಕಡೆ ಲೋಕಾಯುಕ್ತರ ದಾಳಿ…

66
firstsuddi

ಬೆಂಗಳೂರು: ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು, ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿ ಮಧ್ಯವರ್ತಿಗಳು ಹಾಗೂ ಲಂಚಕ್ಕೆ ಬೇಡಿಕೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.