ಏಕತಾ ದಿವಸ್‍ನಲ್ಲಿ ಭಾಗಿಯಾದ ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಪುಷ್ಪ ನಮನ.

31

ಗುಜರಾತ್: ಇಂದು ಸರ್ದಾರ್ ವಲ್ಲಭಾಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅವರು ಗುಜರಾತ್‍ನ ಕೆವಡಿಯಾದಲ್ಲಿರುವ ಸರ್ದಾರ್ ವಲ್ಲಭಾಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು, ಹಾಗೇ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ಸಮಯದಲ್ಲಿ ಮಾತನಾಡಿದ ಅವರು ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ನನ್ನ ನಮನಗಳು. ದೇಶದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಣೆ ಮಾಡುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿತ್ತು. ಅವರ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದೇ ಸಮಯದಲ್ಲಿ ಅವರು ಏಕತಾ ಪ್ರಮಾಣ ವಚನ ಬೋಧಿಸಿದರು. ಸರ್ದಾರ್ ಪಟೇಲರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಈ ವೇಳೆ ನಡೆದ ಪರೇಡ್ ಕಾರ್ಯಕ್ರಮದಲ್ಲಿ 9 ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಕೇಂದ್ರ ಶಸಸ್ತ್ರ ಪೊಲೀಸ್ ಪಡೆ, ಎನ್‍ಸಿಸಿ ಭಾಗಿಯಾಗಿತ್ತು. ಗುಜರಾತ್ ನ ಏಕತಾ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಇತರ ಗಣ್ಯರು ಕೂಡ ಸರ್ದಾರ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿದರು. ನವದೆಹಲಿಯ ಪಟೇಲ್ ಚೌಕ್‍ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.