ಏಕೀಕೃತ ಪಿಂಚಣಿ ವ್ಯವಸ್ಥೆ ಜಾರಿ.

45

ನವದೆಹಲಿ: ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಕೇಂದ್ರ ಕಾರ್ಮಿಕ ಸಚಿವಾಲಯವು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ 1995ರ ಉದ್ಯೋಗಿಗಳ ಪಿಂಚಣಿ ಯೋಜನೆ ಅಡಿಯಲ್ಲಿ ನೂತನ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು ಹೊರತಂದಿದೆ ಎಂದು ಕಾರ್ಮಿಕ ಸಚಿವಾಲಯವು ತಿಳಿಸಲಾಗಿದೆ. ಇಪಿಎಫ್‍ಒ ವ್ಯಾಪ್ತಿಗೆ ಬರುವ 68 ಲಕ್ಷ ರೂಪಾಯಿ ಪಿಂಚಣಿದಾರರಿಗೆ ಇದರಿಂದ ಲಾಭ ಆಗಲಿದೆ. ಪಿಂಚಣಿದಾರರು ಪರಿಶೀಲನೆಗಾಗಿ ಇನ್ಮುಂದೆ ಬ್ಯಾಂಕ್ ಶಾಖೆಗೆ ಹೋಗುವ ಅವಶ್ಯಕತೆ ಇಲ್ಲ. ಬಿಡುಗಡೆಯಾಗುವ ಪಿಂಚಣಿ ಮೊತ್ತ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಿ ವಾಸವಾದರೂ ತಮ್ಮ ಬ್ಯಾಂಕ್ ಬ್ರಾಂಚ್ ಬದಲಿಸುವ ಅಗತ್ಯವಿರುವುದಿಲ್ಲ. ಅದಕ್ಕೆ ಬದಲಾಲಾಗಿ ದೇಶದ ಯಾವುದೇ ರಾಜ್ಯ, ಬ್ಯಾಂಕ್ ಶಾಖೆಯಿಂದ ಬೇಕಾದರೂ ಹಣ ಪಡೆಯಬಹುದಾಗಿದೆ.