ಏರೋ ಇಂಡಿಯಾ-2023ಕ್ಕೆ ಪ್ರಧಾನಿ ಮೋದಿ ಚಾಲನೆ…

39
firstsuddi

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ 98 ದೇಶಗಳಿಂದ 809 ಪ್ರದರ್ಶಕರು ಪಾಲ್ಗೊಂಡಿದ್ದು, 67 ವಿಮಾನಗಳನ್ನ ಪ್ರದರ್ಶಿಸಲಾಗುತ್ತಿದೆ. ಒಟ್ಟು 75 ಸಾವಿರ ಕೋಟಿ ರೂ. ಗಳ 251 ಒಪ್ಪಂದಗಳು ನಡೆಯಲಿವೆ. 32 ವಿದೇಶಿ ರಕ್ಷಣಾ ಸಚಿವರು ಹಾಗೂ ವಿವಿಧ ದೇಶಗಳ 29 ವಾಯುಪಡೆ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಏರ್ ಶೋನ ಮೊದಲ ಮೂರು ದಿನ ವಹಿವಾಟಿಗೆ ಸೀಮಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಫೆ.16, 17 ರಂದು ಮಾತ್ರ ವೈಮಾನಿಕ ಪ್ರದರ್ಶನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಪ್ರಾರಂಭವಾಗಿದೆ.