ಏಷ್ಯನ್ ಗೇಮ್ಸ್ 2023: ಹಾಕಿಯಲ್ಲಿ ಬಂಗಾರ ಗೆದ್ದ ಭಾರತ.

75
firstsuddi

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ, ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಇದಲ್ಲದೆ ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಷ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಸಹ ಖಚಿತಪಡಿಸಿಕೊಂಡಿದೆ.

ಈ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಪೂಲ್ ಎ ಪಂದ್ಯದಲ್ಲಿ ಇದೇ ಜಪಾನ್ ತಂಡವನ್ನು 4-2 ಅಂತರದಿಂದ ಸೋಲಿಸಿದ್ದ ಭಾರತ, ಇದೀಗ ಫೈನಲ್‌ನಲ್ಲಿಯೂ ಅದೇ ರೀತಿಯ ಆಲ್‌ರೌಂಡರ್ ಪ್ರದರ್ಶನ ನೀಡಿದೆ. ಇನ್ನು ಈ ಪಂದ್ಯದ ಮೊದಲಾರ್ಧದಲ್ಲಿ ಜಪಾನ್ ಅದ್ಭುತ ಹೋರಾಟವನ್ನು ನೀಡಿತು. ಹೀಗಾಗಿ ಭಾರತಕ್ಕೆ ಹೆಚ್ಚು ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಆದರೆ ದ್ವಿತೀಯಾರ್ಧದಲ್ಲಿ ನಿಜವಾದ ಆಟ ಪ್ರದರ್ಶಿಸಿದ ಭಾರತ ಹಾಕಿ ತಂಡ ಬರೋಬ್ಬರಿ ನಾಲ್ಕು ಗೋಲು ಬಾರಿಸುವುದರೊಂದಿಗೆ ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು.