ಹ್ಯಾಂಗ್‍ಝೌ: ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಫೈನಲ್‍ನಲ್ಲಿ ಭಾರತದ ಪಾಲಕ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಇದರ ಜೊತೆಗೆ ಇಶಾ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ.










