ನವದೆಹಲಿ : ಏಪ್ರಿಲ್ 10ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.
ದೇಶದಲ್ಲಿರುವ ಈ ವಯೋಮಾನದ ಎಲ್ಲರೂ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಈ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರ ಇಲ್ಲಿಯವರೆಗೆ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸಿಬ್ಬಂದಿ ಮತ್ತು 60 ವರ್ಷ ಮೇಲ್ಪಟ್ಟ 2.4 ಕೋಟಿಗೂ ಅಧಿಕ ಜನರಿಗೆ ಬೂಸ್ಟರ್ ಡೋಸ್ ನೀಡಿದೆ.
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ನಾಲ್ಕನೇ ಅಲೆ ಆರಂಭವಾಗಿದೆ. ಈ ಹಿನ್ನಲೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಬೂಸ್ಟರ್ ಡೋಸ್ ನೀಡಿಕೆಗೆ ಮುಂದಾಗಿದೆ.










