ನವದೆಹಲಿ : ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಶುಕ್ರವಾರ ಪಿ. ಚಿದಂಬರಂ ಅವರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಪೂರ್ಣ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ ಸುಪ್ರೀಂ ಇಂದು ತೀರ್ಪನ್ನು ಪ್ರಕಟಿಸಿದೆ. ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಬಂಧಿಸಿದ್ದರು. ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ದಾಖಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಅಲ್ಲದೇ ಇದೇ ಪ್ರಕರಣವನ್ನು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇಡಿ ಅಧಿಕಾರಿಗಳು ಚಿದಂಬರಂ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.










