ಐರನ್ ಮ್ಯಾನ್ 70.3 ರೇಸ್‍ನಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಜಯ: ಇವರ ಈ ಸಾಧನೆಗೆ ಮೋದಿ ಅಭಿನಂದನೆ.

33

ಗೋವಾ: ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ನಡೆದ ಐರನ್‍ಮ್ಯಾನ್ 70.3 ಚಾಲೆಂಜ್ ರೇಸ್‍ನಲ್ಲಿ ಭಾರತದ ಮೊದಲ ಜನಪ್ರತಿನಿಧಿಯಾಗಿ ಜಯಶೀಲರಾಗಿದ್ದಾರೆ. ತೇಜಸ್ವಿ ಸೂರ್ಯ 8 ಗಂಟೆ, 27 ನಿಮಿಷ 32 ಸೆಕೆಂಡುಗಳಲ್ಲಿ ಐರನ್ ಮ್ಯಾನ್ ಸ್ಪರ್ಧೆಯ ಮೂರು ವಿಭಾಗಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಐರನ್‍ಮ್ಯಾನ್ 70.3 ಗೋವಾದ ನಾಲ್ಕನೇ ಆವೃತ್ತಿಯನ್ನು ರೇಸ್‍ನ ರಾಯಭಾರಿ ಮತ್ತು ಟೆನಿಸ್ ದಂತಕಥೆ ಲಿಯಾಂಡರ್ ಪೇಸ್, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಸಂಸ್ಥಾಪಕ ಮತ್ತು ಸಿಇಒ ಯೋಸ್ಕಾ ಮತ್ತು ಐರನ್‍ಮ್ಯಾನ್ 70.3 ಗೋವಾ ರೇಸ್ ನಿರ್ದೇಶಕ ದೀಪಕ್ ರಾಜ್, ಹರ್ಬಲೈಫ್ ಇಂಡಿಯಾದ ಮಾರ್ಕೆಟಿಂಗ್ ನಿರ್ದೇಶಕ ಗಣೇಶನ್ ವಿ.ಎಸ್.ಅವರು ಭಾನುವಾರ ಮಿರಾಮರ್ ಬೀಚ್‍ನಲ್ಲಿ ಐರನ್ ಮ್ಯಾನ್ ಸ್ಪರ್ಧೆಗೆ ಚಾಲನೆ ನೀಡಿದರು.
ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಈ ಸಾಧನೆಗಾಗಿ ತೇಜಸ್ವಿ ಸೂರ್ಯ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಅನೇಕ ಯುವಕರಿಗೆ ಫಿಟ್‍ನೆಸ್ ಸಂಬಂಧಿತ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೇರೇಪಣೆ ಎಂದು ನನಗೆ ಖಾತ್ರಿಯಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್  ಮಾಡಿದ್ದಾರೆ.ಸದಸ್ಯ ತೇಜಸ್ವಿ ಸೂರ್ಯ ತಮ್ಮ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ, “ಐರನ್‍ಮ್ಯಾನ್ 70.3 ಗೋವಾ, 50ಕ್ಕೂ ಹೆಚ್ಚು ದೇಶಗಳ ಅಥ್ಲೀಟ್‍ಗಳನ್ನು ಆಕರ್ಷಿಸುತ್ತ ಹೆಸರುವಾಸಿಯಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತದ ಫಿಟ್‍ನೆಸ್ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿದೆ. ಸವಾಲೆಂಬುದು ಸಹಿಷ್ಣುತೆ, ದೈಹಿಕ ಮತ್ತು ಮಾನಸಿಕ ಸದೃಢತೆಯ ಅಂತಿಮ ಪರೀಕ್ಷೆಯಾಗಿದೆ. ಕಳೆದ 4 ತಿಂಗಳುಗಳಲ್ಲಿ, ನನ್ನ ಫಿಟ್‍ನೆಸ್ ಸುಧಾರಣೆಗೆ ನಾನು ಕಠಿಣ ತರಬೇತಿ ಪಡೆದಿದ್ದೇನೆ. ಈ ಸವಾಲನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಂತೋಷವಾಗಿದೆ. ಪ್ರಧಾನಿ ಮೋದಿಯವರು ಆರಂಭಿಸಿದ ಫಿಟ್ ಇಂಡಿಯಾವು ನನಗೆ ಸ್ಫೂರ್ತಿಯಾಗಿದೆ. ಅದು ನನ್ನ ಫಿಟ್‍ನೆಸ್ ಗುರಿ ತಲುಪಲು ನೆರವಾಯಿತು” ಎಂದು ಸೂರ್ಯ ಹೇಳಿದ್ದಾರೆ.