ಐವರು ಸಚಿವರು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ…

45
firstsuddi

ಬೆಂಗಳೂರು: ಐದು ಮಂದಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಈ ಕೆಳಕಂಡ ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ- ದಿನೇಶ್ ಗುಂಡೂರಾವ್, ಕಂದಾಯ ಸಚಿವ- ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ- ಪ್ರಿಯಾಂಕ್ ಖರ್ಗೆ, ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ- ಈಶ್ವರ್ ಬಿ. ಖಂಡ್ರೆ, ಕಾರ್ಮಿಕ ಸಚಿವ- ಸಂತೋಷ್ ಎಸ್.ಲಾಡ್ ಅವರನ್ನು ನೇಮಕ ಮಾಡಲಾಗಿದೆ.