ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,ಮೃತರನ್ನು ನಾಗೇಶ್ ಸದೇರಿಗುಪ್ಪೆ(30), ವಿಜಯಲಕ್ಷಿ(26), ಸಪ್ನ(8) ಮತ್ತು ಸಮಂತ್(4) ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೂ ಮುನ್ನ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಫ್ರೈಡ್ ರೈಸ್ ನಲ್ಲಿ ವಿಷ ಹಾಕಿ ಹತ್ಯೆ ಮಾಡಿದ್ದಾನೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಗ್ರಾಮದ ಸುನಗ್ ಗ್ರಾಮದವರಾದ ನಾಗೇಶ್ ಚಾಲಕನಾಗಿ ಮತ್ತು ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಕಾರಣ ಎನ್ನಲಾಗಿದೆ. ಈ ಕುರಿತು ನಾಗೇಶ್ ಡೆತ್‍ನೋಟ್ ಬರೆದಿದ್ದು, ಮಹಿಳೆಯ ಹೆಸರನ್ನು ಉಲ್ಲೇಖಿಸಿ, ಆಕೆಯೇ ನಮ್ಮ ಸಾವಿಗೆ ಕಾರಣ. ನನ್ನ ಪತ್ನಿಯನ್ನು ತನ್ನ ಧರ್ಮಕ್ಕೆ ಮತಾಂತರ ಮಾಡಿದ್ದಳು. ಹೀಗಾಗಿ ವಿಜಯಲಕ್ಷ್ಮಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಆ ಕಾರಣಕ್ಕೆ ಆ ಕಾರಣಕ್ಕೆ ಕೃತ್ಯ ಎಸಗಿದ್ದೇನೆ ಎಂದು ಆತ ಡೆತ್ನೋಟ್ನಲ್ಲಿ ಬರೆದಿದ್ದಾನೆ ಎಂದು ತಿಳಿದುಬಂದಿದೆ.










