ಹಾವೇರಿ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ಒಂದೇ ಕುಟುಂಬದವರಾದ ತಂದೆ ಹನುಮಂತಗೌಡ ಪಾಟೀಲ (54), ತಾಯಿ ಲಲಿತಾ ಪಾಟೀಲ (50), ಮತ್ತು ಮಗಳು ನೇತ್ರಾ ಪಾಟೀಲ (22) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರೂ. ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಈ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










