ಒಂದೇ ಪಂದ್ಯದಲ್ಲಿ ಧೋನಿ ಅವರ ಎರಡೆರಡು ದಾಖಲೆಗಳನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ…

320
firstsuddi

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಹಿಂದಿಕ್ಕುವುದರ ಜೊತೆಗೆ ಏಕದಿನ ಪಂದ್ಯದಲ್ಲಿ ನಾಯಕನಾಗಿ ಅತೀ ಕಡಿಮೆ ಇನ್ನಿಂಗ್ಸ್ ನಲ್ಲಿ 5 ಸಾವಿರ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರು ನಾಯಕನಾಗಿ ಭಾರತದ ಪರವಾಗಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ 303 ಇನ್ನಿಂಗ್ಸ್ ಗಳಿಂದ 11,207 ರನ್ ಹೊಡೆದಿದ್ದರು. ವಿರಾಟ್ ಕೊಹ್ಲಿ ಅವರು ನಿನ್ನೆ ನಡೆದ ಪಂದ್ಯದಲ್ಲಿ 89ರನ್ ಗಳಿಸುವ ಮೂಲಕ ಧೋನಿ ಅವರ ಹೆಸರಿನಲ್ಲಿರುವ ದಾಖಲೆಯನ್ನು ಮುರಿದಿದ್ದು, 199 ಇನ್ನಿಂಗ್ಸ್ ಗಳಿಂದ 11,208 ರನ್ ಹೊಡೆದಿದಾರೆ. ಅಲ್ಲದೇ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.