ಒನಕೆಯಿಂದ ಪತಿಯ ತಲೆಗೆ ಹೊಡೆದು ಹತ್ಯೆ ಮಾಡಿದ ಪತ್ನಿ…

209
firstsuddi

ಆಂಧ್ರಪ್ರದೇಶ : ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿ ಒನಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ರತ್ನಾಕರ್ ಮೃತ ವ್ಯಕ್ತಿ ಎನ್ನಲಾಗಿದ್ದು, ರತ್ನಾಕರ್ ಅವರು ವಿಜಯನಗರ ಜಿಲ್ಲೆಯ ಮಹಿಳೆಯೊಂದಿಗೆ ಸಹಜೀವನ ನಡೆಸುತ್ತಿದ್ದರು. ವಿಷಯ ತಿಳಿದ ಪತ್ನಿ ಸುನಿತಾ ಅವರು ಪ್ರತಿದಿನ ಪತಿಯೊಂದಿಗೆ ಜಗಳವಾಡುತ್ತಿದ್ದರು. ಇದರಿಂದ ಕೋಪಗೊಂಡ ಪತ್ನಿ ಒನಕೆಯಿಂದ ಪತಿಯ ತಲೆಗೆ ಹೊಡೆದು ಹತ್ಯೆ ಮಾಡಿದ್ದು, ಬಳಿಕ ತನ್ನ ಮಗನೊಂದಿಗೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.