ಹೈದರಾಬಾದ್: ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ವಿಚಾರವಾಗಿ ತೆಲುಗು ನಿರ್ಮಾಪಕ ತಮ್ಮರೆಡ್ಡಿ ಭಾರದ್ವಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗವೇ ತಲೆತಗ್ಗಿಸುವಂತಾ ಪರಿಸ್ಥಿತಿಯಾಗಿದೆ ಎಂದು ಕಿಡಿಕಾರುತ್ತ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಐಕಾನ್ ಸ್ಟಾರ್ ಅಲ್ಲು ಅರ್ಜನ್ ಅವರು ಮಾಡಿದ ತಪ್ಪಿನಿಂದಾಗಿ ಇಂದು ಇಡೀ ತೆಲುಗು ಚಿತ್ರರಂಗವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರ ಮುಂದೆ ಕೈಮುಗಿದು ನಿಲ್ಲುವಂತಾ ಪರಿಸ್ಥಿತಿಯಾಗಿದೆ ಎಂದು ತೆಲುಗು ನಿರ್ಮಾಪಕ, ನಿರ್ದೇಶಕ ತಮ್ಮಾರೆಡ್ಡಿ ಭಾರದ್ವಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಷ್ಪ–2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ಸಂದ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಬಗ್ಗೆ ಹಾಗೂ ಅಲ್ಲು ಅರ್ಜುನ್ ಅವರ ಮೇಲೆ ಹಾಕಿರುವ ಕೇಸ್ ಬಗ್ಗೆ ಖಾಸಗಿ ಮಾಧ್ಯಮಗಾರರ ಜೊತೆ ಮಾತನಾಡಿರುವ ನಿರ್ದೇಶಕ ತಮ್ಮಾರೆಡ್ಡಿ ಭಾರದ್ವಾಜ್, ಒಬ್ಬ ನಟ, ಸ್ಟಾರ್ ಆದವನು ಸಾರ್ವಜನಿಕವಾಗಿ ಹೇಗೆ ಇರಬೇಕೊ ಹಾಗೆ ಅಲ್ಲು ಅರ್ಜುನ್ ಇರಲಿಲ್ಲ. ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಸೇರಿ ತೊಂದರೆಯಾಗುತ್ತದೆ ಎಂದು ತಿಳಿದಿದ್ದರು ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದ್ದಾರೆ. ಅವರಿಂದಾಗಿಯೇ ಇಂದು ಟಾಲಿವುಡ್ ಸಿಎಂ ರೇವಂತ್ ರೆಡ್ಡಿ ಮುಂದೆ ಕೈ ಮುಗಿದು ನಿಲ್ಲುವಂತಾಗಿದೆ. ಇದು ಸರಿಯಲ್ಲ ಎಂದು ಬೇಸರದ ಜೊತೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.










