ಒಮಿಕ್ರಾನ್ ಭೀತಿ – ಹೊಸ ಸೋಂಕಿನಿಂದ ಅಪಾಯದಲ್ಲಿರುವ ದೇಶಗಳ ಮೇಲೆ ಹೆಚ್ಚಿನ ನಿಗಾ ಇಡಲು ಮೋದಿ ಸೂಚನೆ…

58
firstsuddi

ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರಿ ತಳಿಯ ಒಮಿಕ್ರಾನ್ ಅಥವಾ ಬಿ.1.1.529 ಎಂದು ಹೆಸರಿಟ್ಟಿರುವ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ ನಡೆಯಿತು.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರು, ಲಸಿಕೆ ಅಭಿಯಾನ ಹಾಗೂ ಹೊಸ ತಳಿ ಕುರಿತಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಹೊಸ ತಳಿ ಹರಡುವಿಕೆ ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಿ, ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ನೀಡಿರುವ ಸಡಿಲಿಕೆ ಮತ್ತೊಮ್ಮೆ ಪರಾಮರ್ಶೆಗೆ ಸೂಚನೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು, ಕೋವಿಡ್ ಪರೀಕ್ಷೆ ನಡೆಸಬೇಕು, ಎರಡನೇ ಡೋಸ್ ಕೋವಿಡ್ ಲಸಿಕೆ ವೇಗ ಮತ್ತಷ್ಟು ಹೆಚ್ಚಿಸಲು ಸೂಚನೆ, ಮಾಸ್ಕ್, ಸಾಮಾಜಿಕ ಅಂತರ ಹಾಗೂ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ ನೀಡಿದ್ದಾರೆ.