ನವದೆಹಲಿ : ಓಡಿ ಹೋಗಿ ಮದುವೆಯಾಗಿದ್ದಕ್ಕೆ ಯುವತಿಯ ಕುಟುಂಬಸ್ಥರು ಯುವಕನನ್ನು ಅಪಹರಿಸಿ ಆತನ ಗುಪ್ತಾಂಗವನ್ನೇ ಕತ್ತರಿಸಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಯತ್ನ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಹಲ್ಲೆಗೊಳಗಾದ 22 ವರ್ಷದ ಯುವಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆತನನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಕುಟುಂಬಸ್ಥರು ಆ ಯುವಕನೊಂದಿಗೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಇಬ್ಬರು ಗುಟ್ಟಾಗಿ ಮದುವೆಯಾಗಿದ್ದರು. ವಿವಾಹದ ನಂತರ ಇದೇ 22 ರಂದು ದೆಹಲಿಗೆ ವಾಪಸ್ ಆಗಿ ತಮ್ಮ ಕುಟುಂಬದವರಿಂದ ರಕ್ಷಣೆ ನೀಡಬೇಕೆಂದು ರಾಜೌರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.
ಈ ವಿಷಯ ತಿಳಿದ ಯುವತಿಯ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸ್ ಠಾಣೆಯಿಂದ ಯುವಕ ಹೊರಗೆ ಬಂದಾಗ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಆತನನ್ನು ಕಿಡ್ನಾಪ್ ಮಾಡಿ ಮೊದಲು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಆತನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.










