ಮುಂಬೈ : ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಡಿಸೆಂಬರ್ 11 ಮತ್ತು 12 ರಂದು ಮುಂಬೈನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರ‍್ಯಾಲಿ, ಮೋರ್ಚಾ, ಮೆರವಣಿಗೆ ಸೇರಿದಂತೆ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಮಹಾರಾಷ್ಟ್ರದಲ್ಲಿ 3 ವರ್ಷದ ಮಗು ಸೇರಿದಂತೆ ಸೇರಿದಂತೆ 7 ಮಂದಿಯಲ್ಲಿ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಆ ಪೈಕಿ 3 ಪ್ರಕರಣಗಳು ಮುಂಬೈನಲ್ಲೇ ವರದಿಯಾಗಿವೆ. ನಗರದಲ್ಲಿ ಓಮಿಕ್ರಾನ್ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ನಿಷೇಧಾಜ್ಞೆಗಳನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 ಮತ್ತು ಇತರ ಕಾನೂನು ನಿಬಂಧನೆಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.