ಲಕ್ನೋ : ಕೋವಿಡ್ ರೂಪಾಂತರಿ ಓಮಿಕ್ರಾನ್‍ಗೆ ಹೆದರಿ ಪ್ರೊಫೆಸರ್ವೊಬ್ಬರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಪರಾರಿಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಲ್ಯಾಣ್ಪುರ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಖಾಸಗಿ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಆಗಿದ್ದಾರೆ. ಪತ್ನಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಮಗ ಮತ್ತು ಮಗಳನ್ನು ತಲೆಯನ್ನು ಸುತ್ತಿಗೆಯಿಂದ ಜಜ್ಜಿ ಕೊಂದು ಬಳಿಕ ಮನೆಯಿಂದ ಪರಾರಿಯಾಗಿದ್ದಾರೆ. ಅಲ್ಲದೇ ತಾನು ಮಾಡಿದ ಕೃತ್ಯವನ್ನು ವಾಟ್ಸ್ ಆ್ಯಪ್ ಮೂಲಕ ತನ್ನ ಸಹೋದರನಿಗೆ ತಿಳಿಸಿದ್ದಾನೆ.
ಆರೋಪಿಯ ಸಹೋದರ ಘಟನೆ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರೊಫೆಸರ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿಂದೆ ಕೂಡ ಪತ್ನಿಯನ್ನು ಕೊಲ್ಲಲು ಯತ್ನಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಪ್ರೊಫೆಸರ್ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ಆತನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.










