ಓಮಿಕ್ರಾನ್ ಭೀತಿ – ಇಂದಿನಿಂದ ರಾಷ್ಟ್ರ ರಾಜಧಾನಿಯಲ್ಲಿ ನೈಟ್ ಕರ್ಫ್ಯೂ ಜಾರಿ…

73
firstsuddi

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಓಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂಗೆ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಆದೇಶಿಸಿದೆ.

ಈಗಾಗಲೇ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಉತ್ತರ ಪ್ರದೇಶ, ಹರಿಯಾಣ, ಗುಜರಾತ್ ನಲ್ಲೂ ನೈಟ್ ಕರ್ಫ್ಯೂ ಜಾರಿಯಾಗಿದೆ.