ಓಮಿಕ್ರಾನ್ ಮಧ್ಯೆಯೂ ಟೆಸ್ಟ್, ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ…

111
firstsuddi

ನವದೆಹಲಿ : ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಕೇವಲ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದು, ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ನಂತರ ಆಯೋಜಿಸಲಾಗುವುದು ಎಂದು ಬಿಸಿಸಿಐ ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತವು ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಪ್ರವಾಸದಲ್ಲಿ ಭಾರತ ತಂಡ 3 ಟೆಸ್ಟ್, 3 ಏಕದಿನ ಹಾಗೂ 4 ಟಿ20 ಸರಣಿಗಳ ವೇಳಾಪಟ್ಟಿ ಈಗಾಗಲೇ ನಿಗದಿಯಾಗಿತ್ತು. ಆದರೆ 4 ಟಿ20 ಪಂದ್ಯಗಳನ್ನು ಮುಂದೂಡಿದ್ದಾರೆ. ಡಿ.17ರಿಂದ ಜೊಹಾನ್ಸ್ ಬರ್ಗ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.