ಓಮಿಕ್ರಾನ್ ಸೋಂಕಿತ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್…

52
firstsuddi

ಬೆಂಗಳೂರು : ಓಮಿಕ್ರಾನ್ ಸೋಂಕಿಗೆ ತುತ್ತಾಗಿದ್ದ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಡಿಸೆಂಬರ್ 1 ರಂದು ಹಿಂದಿರುಗಿದ್ದ 34 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ನೆಗೆಟಿವ್ ವರದಿ ಬಂದಿತ್ತು. ಆದರೆ ಮನೆಗೆ ತಲುಪಿದ ಮರು ದಿನ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಲ್ಯಾಬ್ಗೆ ಹೋಗಿ ಗಂಟಲು ದ್ರವ ನೀಡಿ ಬಂದಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು.

ಹೈರಿಸ್ಕ್ ದೇಶದಿಂದ ಬಂದ ಹಿನ್ನೆಲೆ ಸ್ಯಾಂಪಲ್ಸ್ ನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿತ್ತು. ಈ ವೇಳೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಡಿಸೆಂಬರ್ 3 ರಿಂದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಿ, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಆರ್ ಟಿಪಿಸಿಆರ್ ಟೆಸ್ಟ್ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.