ಮುಂಬೈ : ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೇಂದ್ರ ಸರ್ಕಾರವು ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ತಕ್ಷಣ ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ನವಾಬ್ ಮಲಿಕ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ನಟಿ ರಣಾವತ್ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾವವು ಕಂಗನಾ ಅವರಿಂದ ಪದ್ಮಶ್ರೀಯನ್ನು ಹಿಂಪಡೆಯಬೇಕು. ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು. ಅಲ್ಲದೇ ಇವರ ಇವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.










