ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನ – ಪ್ರೀತಿಯ ಅಪ್ಪುಗಾಗಿ ಹರಿದುಬಂದ ಜನಸಾಗರ…

89
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನಟನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಿದ್ದಾರೆ. ರಾತ್ರಿಯಿಡೀ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೂ ಸಹ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಗರ ಹರಿದುಬರುತ್ತಿದೆ. ಉತ್ತರ ಕರ್ನಾಟಕ ಭಾಗದಿಂದ ಬಸ್ ಗಳನ್ನು ಮಾಡಿಕೊಂಡು ಅಭಿಮಾನಿಗಳು ಅಪ್ಪು ಅಂತಿಮ ದರ್ಶನ ಪಡೆಯಲು ಬಂದಿದ್ದಾರೆ. ಮಕ್ಕಳು, ಯುವಕರು, ವಯೋವೃದ್ಧರು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೂಡಿಯೋ ಕಡೆಗೆ ಮುಖಮಾಡಿದ್ದು, ರಾಜ್ಯ, ಅಂತಾರಾಜ್ಯಗಳಿಂದ ಜನರು ಬರುತ್ತಿದ್ದು, ಜನರನ್ನು ಅಷ್ಟೇ ತಾಳ್ಮೆಯಿಂದ ಪೊಲೀಸರು ನಿಯಂತ್ರಿಸುತ್ತಿದ್ದಾರೆ. ಪುನೀತ್ ಪುತ್ರಿ ಅಮೆರಿಕದಲ್ಲಿದ್ದು, ಅವರ ಬಂದ ಬಳಿಕ ಅಂತ್ಯಕ್ರಿಯೆ ನೆರವೇರಲಿದೆ.