ಕಂದಕಕ್ಕೆ ಉರುಳಿದ ಟ್ರಕ್, ಮೂವರು ಬಿ.ಎಸ್.ಎಫ್ ಯೋಧರ ಸಾವು…

214
firstsuddi

ರಾಜಸ್ಥಾನ : ಭಾರತೀಯ ವಾಯುಪಡೆಯ ಯೋಧರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್ ಕಂದಕಕ್ಕೆ ಉರುಳಿ ಬಿದ್ದು, ಮೂವರು ಬಿ.ಎಸ್.ಎಫ್ ಯೋಧರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. 8 ಮಂದಿ ಯೋಧರು ಚೌಹತನ್ ಪಟ್ಟಣದಲ್ಲಿರುವ ಸೇನಾ ಪಡೆಯ ವಿಮಾನ ನಿಲ್ದಾಣದಿಂದ ಆಗಮಿಸುತ್ತಿದ್ದ ವೇಳೆ ಟ್ರಕ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಘಟನೆಯಲ್ಲಿ ಮೂವರು ಯೋಧರು ಮೃತಪಟ್ಟಿದ್ದು, ಇಬ್ಬರು ಯೋಧರು ಗಂಭಿರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.