ಕಂದಕಕ್ಕೆ ಉರುಳಿ ಬಿದ್ದ ಬಸ್- 38 ಮಂದಿ ದುರ್ಮರಣ…

52
firstsuddi

ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಉರುಳಿ ಬಿದ್ದ ಪರಿಣಾಮ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ.

ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.