ಕಂದಕಕ್ಕೆ ಬಿದ್ದ ಟೂರಿಸ್ಟ್ ಟೆಂಪೋ – ಏಳು ಮಂದಿ ದುರ್ಮರಣ…

85
firstsuddi

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಟೂರಿಸ್ಟ್ ಟೆಂಪೋ ಟ್ರಾವೆಲರ್‌ವೊಂದು ಕಂದಕಕ್ಕೆ ಬಿದ್ದಿದ್ದು, ಏಳು ಜನರು ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಸಂಭವಿಸಿದ ದುರಂತದಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಬಂಜಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಗಾಯಾಳುಗಳನ್ನು ಕುಲ್ಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ ಐಐಟಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಾಗಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಂಜಾರಿನ ಘಿಯಾಗಿ ಜಲೋಡಾ ಬಳಿಯ ರಾಷ್ಟ್ರೀಯ ಹೆದ್ದಾರಿ-305 ರಲ್ಲಿ ಪ್ರವಾಸಿಗರ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಮಾಹಿತಿ ಬಂದ ತಕ್ಷಣ ಕೂಡಲೇ ಸ್ಥಳಕ್ಕೆ ತಲುಪಿ ರಕ್ಷಣಾ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.