ಕಟೀಲು ದುರ್ಗಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ…

355
firstsuddi

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ಸಂಬಂಧಿಗಳ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಇವರಿಗೆ ದೇವಾಲಯದ ಪ್ರಧಾನ ಅರ್ಚಕರಾದ ಅನಂತ ಪದ್ಮನಾಭ ಅವರು ಶಿಲ್ಪಾ ಶೆಟ್ಟಿ ಅವರಿಗೆ ದೇವರ ಶೇಷವಸ್ತ್ರ ನೀಡಿ ಗೌರವಿಸಿದ್ದು, ಬಳಿಕ 2020 ಜನವರಿ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಬರುವಂತೆ ಆಮಂತ್ರಣ ಪತ್ರಿಕೆ ನೀಡಿದ್ದು, ಪತ್ರಿಕೆ ಸ್ವೀಕರಿಸಿದ ನಟಿ ಶಿಲ್ಪಾ ಶೆಟ್ಟಿ ಅವರು ಬ್ರಹ್ಮಕಲಶೋತ್ಸವಕ್ಕೆ ಬರುವುದಾಗಿ ತುಳು ಭಾಷೆಯಲ್ಲೇ ಹೇಳಿದ್ದು, ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.