ಕಟೀಲು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಹೃದಯಾಘಾತದಿಂದ ನಿಧನ…

53
firstsuddi

ಮಂಗಳೂರು : ಕಟೀಲು ಮೇಳದ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಬಳಿಯ ಸರಸ್ವತಿ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು.

ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.