ಕಟ್ಟಡದ ಗೋಡೆ ಕುಸಿದು ಬಿದ್ದು 15ಜನ ಸಾವು…

242
firstsuddi

ಪುಣೆ : ಭಾರಿ ಮಳೆಯಿಂದಾಗಿ ಕಟ್ಟಡದ ಗೋಡೆ ಕುಸಿದು ಬಿದ್ದು 4 ಮಕ್ಕಳು ಸೇರಿದಂತೆ 15ಜನ ಮೃತಪಟ್ಟಿರುವ ಘಟನೆ ಪುಣೆಯ ಕೊಂಡ್ವಾ ಪ್ರದೇಶದಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾರ್ಟ್‍ಮೆಂಟ್ ಪಕ್ಕದಲ್ಲಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಟಿನ್ ಶೆಡ್ ಮೇಲೆ ಬಿದ್ದ ಪರಿಣಾಮ ಶೆಡ್‍ನಲ್ಲಿ ಮಲಗಿದ್ದ 15 ಜನ ಮೃತಪಟ್ಟಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಎನ್‍ಡಿಆರ್‍ಎಫ್ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.