ಕಠಿಣ ಹೋರಾಟಕ್ಕೆ ಸಿದ್ಧರಾಗಿ : ಬಿಜೆಪಿ ನಾಯಕರಿಗೆ ಕರೆ ನೀಡಿದ ಮೋದಿ.

64
firstsuddi

ನವದೆಹಲಿ : ಕಠಿಣ ಹೋರಾಟಕ್ಕೆ ಸಿದ್ಧರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.

ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ಪಕ್ಷವು ಎಷ್ಟು ಬೆಳೆದು ಯಶಸ್ಸಿನ ಹಾದಿಯಲ್ಲಿದ್ದರೂ ಅಷ್ಟೇ ಪ್ರತಿಪಕ್ಷಗಳ ದಾಳಿಯನ್ನೂ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇಲ್ಲಿನ ಸಂಸತ್ ಭವನದ ಸಂಕೀರ್ಣದಲ್ಲಿ ಇಂದು ಬೆಳಗ್ಗೆ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಅಧಿವೇಶನದ ಎರಡನೇ ಹಂತದಲ್ಲಿ ಇದೇ ಮೊದಲ ಬಾರಿಗೆ ಈ ಸಭೆ ನಡೆಯುತ್ತಿದೆ.

ಈಶಾನ್ಯ ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರು ಪ್ರಮುಖ ವಿಜಯಗಳನ್ನು ಗಳಿಸಿದ್ದಕ್ಕಾಗಿ ಬಿಜೆಪಿ ಸಂಸದರು ಮೊದಲು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು.

ಬಜೆಟ್ ಅಧಿವೇಶನ ಮುಂದೂಡಿಕೆ, ರಾಹುಲ್ ಗಾಂಧಿಯ ಅನರ್ಹತೆ ಪ್ರಶ್ನಿಸಿ ಪ್ರತಿಭಟನೆ ಮತ್ತು ಅದಾನಿ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸುತ್ತಿರುವ ಪ್ರಕ್ಷುಬ್ಧ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಸಂಸತ್ತಿನ ಎರಡೂ ಸದನಗಳು ಅಸ್ತವ್ಯಸ್ತಗೊಂಡಿವೆ ಮತ್ತು ಬಜೆಟ್ ವಿಧಿವಿಧಾನಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ವ್ಯವಹಾರಗಳು ನಡೆದಿಲ್ಲ, ನಾವು ನಮ್ಮ ಕೆಲಸಗಳನ್ನು ಜನರವರೆಗೂ ತಲುಪಿಸಬೇಕು ಎಂದರು.