ಕಡಿಮೆ ಆಹಾರ ಸೇವಿಸಿ – ಉತ್ತರ ಕೊರಿಯಾದ ಜನರಿಗೆ ಕಿಮ್ ಜಾಂಗ್ ಉನ್ ಸಂದೇಶ…

75
firstsuddi

ಸಿಯೋಲ್(ಉತ್ತರ ಕೊರಿಯಾ) : ಕಡಿಮೆ ಆಹಾರ ತಿನ್ನಿ ಎಂದು ಉತ್ತರ ಕೊರಿಯಾದ ಜನರಿಗೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಂದೇಶವನ್ನು ನೀಡಿದ್ದಾರೆ. 

ದೇಶದಲ್ಲಿ ತೀವ್ರವಾದ ಆಹಾರ ಬಿಕ್ಕಟ್ಟು ಎದುರಾಗಿದೆ. 2025ರೊಳಗೆ ಚೀನಾ ಜತೆಗಿನ ಗಡಿಯನ್ನು ಪುನಾರಂಭಿಸುವವರೆಗೆ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರ ಸೇವಿಸಬೇಕೆಂದು ಕಿಮ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ. ಇನ್ನೂ ಮೂರು ವರ್ಷಗಳ ಕಾಲ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ ಅವರು ಹೇಳಿದ್ದಾರೆ.

ಆಹಾರ ಬಿಕ್ಕಟ್ಟಿಗೆ ಏನು ಕಾರಣ?
ಈಗಾಗಲೇ ಕೋವಿಡ್ನಿಂದ ತತ್ತರಿಸಿರುವ ಕೊರಿಯಾಗೆ ಇತ್ತೀಚೆಗೆ ಸುರಿದ ಭಾರಿ ಮಳೆಯು ದೊಡ್ಡ ಹೊಡೆತ ನೀಡಿದೆ. ಅತಿವೃಷ್ಟಿಯಿಂದಾಗಿ ಬೆಳೆಗಳು ನೆಲಕಚ್ಚಿದೆ. ಅಲ್ಲದೇ ಹಣಕಾಸಿನ ಕೊರತೆಯಿಂದಾಗಿ ಹೊರ ದೇಶಗಳಿಂದಲೂ ಆಹಾರ ಸಾಮಗ್ರಿಗಳ ಪೂರೈಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.