ಚಿಕ್ಕಮಗಳೂರು : ಸರಸ್ವತಿಪುರ ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ…

821
firstsuddi

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ ಆಗಿರುವ ಘಟನೆ ಕಡೂರು-ಮಂಗಳೂರು ರಸ್ತೆಯ ಸಖರಾಯಪಟ್ಟಣ ಸಮೀಪದ ಸರಸ್ವತಿ ಪುರದಲ್ಲಿ ನಡೆದಿದೆ. ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಬಸ್ ಎನ್ನಲಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.