ಕಣ್ಣಿಗೆ ಖಾರದ ಪುಡಿ ಎರಚಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬಲಗೈ ಬಂಟನ ಬರ್ಬರ ಹತ್ಯೆ…

65
firstsuddi

ಕಲಬುರಗಿ: ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ.

ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್ಎನ್ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮದ್ಯಪಾನದ ಪಾರ್ಟಿ ಹೆಸರಿನಲ್ಲಿ ಗಿರೀಶ್ ಚಕ್ರ ಅವರನ್ನು ಸಾಗನೂರು ಗ್ರಾಮದ ಜಮೀನಿಗೆ ಕರೆಸಿಕೊಳ್ಳಲಾಗಿತ್ತು. ಆದರೆ, ಸ್ನೇಹಿತರೇ ಮಧ್ಯರಾತ್ರಿ ಕಣ್ಣಿಗೆ ಕಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಕೊಲೆಯಾದ ಗಿರೀಶ್ ಚಕ್ರ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.