ಕತ್ರಿನಾ ಕೈಫ್-ವಿಕ್ಕಿ ಕೌಶಲ್‍ಗೆ ಜೀವ ಬೆದರಿಕೆ…

64
firstsuddi

ಬಾಲಿವುಡ್‍ನ ಕ್ಯೂಟ್ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಕುರಿತು ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಶುರುಮಾಡಿದ್ದಾರೆ.

2021 ಡಿಸೆಂಬರ್ 9ರಂದು ಕತ್ರಿನಾ-ವಿಕ್ಕಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸದ್ಯ ಇಬ್ಬರೂ ಬಾಲಿವುಡ್ ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಜೀವ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣ ಆಗಿದೆ. ಯಾವ ಕಾರಣಕ್ಕಾಗಿ ಈ ದಂಪತಿಯನ್ನು ಟಾರ್ಗೆಟ್ ಮಾಡಲಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಕರೆ ಬಂದಿತ್ತು. ಅವರಿಗೆ ಈಗ ಹೆಚ್ಚುವರಿ ಭದ್ರತೆ ನೀಡಲಾಗುತ್ತಿದೆ.