ಕನಕಪುರದಲ್ಲೇ ಕಲ್ಲು ಒಡೆಯುತ್ತೇನೆಯೇ ಒರತು ದೆಹಲಿಗೆ ಹೋಗುವುದಿಲ್ಲ : ಡಿ.ಕೆ. ಶಿವಕುಮಾರ್.

189
firstsuddi

ಬೆಂಗಳೂರು : ಕನಕಪುರದಲ್ಲೇ ಕಲ್ಲು ಒಡೆಯುತ್ತೇನೆಯೇ ಒರತು ದೆಹಲಿಗೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಅದನ್ನು ನಿಭಾಯಿಸುತ್ತೇನೆ. ಅದನ್ನು ಬಿಟ್ಟರೆ ನಾನು ದೆಹಲಿ ರಾಜಕೀಯಕ್ಕೆ ಹೋಗುವುದಿಲ್ಲ. ಬೇಕಾದರೆ ಕನಕಪುರದಲ್ಲೇ ಕಲ್ಲು ಒಡೆಯುತ್ತೇನೆ ಅಥವಾ ರೇಷ್ಮೆ, ಕಡಲೆ, ಅರಿಶಿಣ ಬೆಳೆಯುತ್ತೇನೆಯೇ ಒರತು ದೆಹಲಿಗೆ ಹೋಗುವುದಿಲ್ಲ ಎಂದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ನೇಮಕದ ಬಗ್ಗೆ ಸಂಬಂಧಪಟ್ಟವರನ್ನು ಕೇಳಿ. ಎಐಸಿಸಿ ಅಧ್ಯಕ್ಷರು ಅಂಗಡಿಯಲ್ಲಿ ಸಿಗುವಂತಹ ವಸ್ತುವಲ್ಲ. ನಾನು ಅವರನ್ನು ಭೇಟಿ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ನನಗೇನೂ ಆತುರ ಇಲ್ಲ ಎಂದರು.
ಇದೇ ವೇಳೆ ಇಡಿ ಅಧಿಕಾರಿಗಳಿಂದ ನೋಟೀಸ್ ನೀಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ನನಗೆ ಇಡಿ ಅಧಿಕಾರಿಗಳಿಂದ ಯಾವುದೇ ನೋಟೀಸ್ ಬಂದಿಲ್ಲ. ಸುಳ್ಳು ಸುದ್ದಿ ಮಾಡಿದ್ದೀರಾ. ಕೇಂದ್ರ ಮತ್ತು ಯಡಿಯೂರಪ್ಪ ಸಿಬಿಐ ಅವರಿಗೆ ನನ್ನ ಮನೆ ಸುತ್ತಲೂ ಇರುವಂತೆ ಹೇಳಿದ್ದಾರೆ. ರಾಜ್ಯದಲ್ಲಿ ಲೋಕಾಯುಕ್ತ, ಎಸಿಬಿ ಇದ್ದರೂ ಸಿಎಂ ಸಿಬಿಐಗೆ ಪತ್ರ ಬರೆದಿದ್ದಾರೆ. ಎಲ್ಲವನ್ನೂ ಆರ್ ಟಿಐ ಅಡಿ ದಾಖಲೆ ತೆಗೆದುಕೊಂಡಿದ್ದೇನೆ. ಮಾಧ್ಯಮಗಳ ಮುಂದೆ ಏನೂ ಹೇಳುವುದಿಲ್ಲ ಎಂದರು.