ಕನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ…

129
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು 26 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಬೀದರ್-11, ಹಾಸನ-4, ಕಲಬುರಗಿ, ದಾವಣಗೆರೆ, ವಿಜಯಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು, ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.