‘ಮುಂಗಾಳು ಮಳೆ’ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ನಟಿ ಪೂಜಾ ಗಾಂಧಿ ಅವರು ಮಿಲನ, ದಂಡುಪಾಳ್ಯ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ. ಇದೀಗ ಸಹನಟಿ ರಮ್ಯಾಗೆ ಕನ್ನಡದಲ್ಲೇ ಪತ್ರ ಬರೆದಿದ್ದು, ರಮ್ಯಾರನ್ನ ಹಾಡಿ ಹೊಗಳಿದ್ದಾರೆ.
ರಮೇಶ್ ಸರ್, ನಿಮ್ಮ ಮತ್ತು ರಮ್ಯ ಮಧ್ಯೆ ನಡೆಯುವ ಮಾತಿನ ಜುಗಲ್‌ಬಂದಿ ನೋಡೋದಕ್ಕೆ ಲಕ್ಷಾಂತರ ಕನ್ನಡಿಗರ ರೀತಿ ನಾನೂ ಕೂಡ ಕಾತರದಿಂದ ಕಾಯುತ್ತಿದ್ದೇನೆ. ರಮ್ಯಾ ಒಳ್ಳೆಯ ವ್ಯಕ್ತಿ. ಅವರಿಗೆ ಏನು ಅನಿಸುತ್ತದೆಯೋ ಅದನ್ನೇ ಹೇಳುತ್ತಾರೆ ಎಂದು ಪೂಜಾ ಪತ್ರ ಆರಂಭ ಮಾಡಿದ್ದಾರೆ.
ನನ್ನ ವೈಯಕ್ತಿಕವಾಗಿ ರಮ್ಯಾ ಯಾಕೆ ಇಷ್ಟ ಆಗ್ತಾರೆ ಅಂದ್ರೆ, ಅವರು ತಮ್ಮಸಹ ಕಲಾವಿದರ ಪರವಾಗಿ ನಿಲ್ಲುತ್ತಾರೆ. ಅವರಲ್ಲಿನ ಈ ಗುಣ ಇಷ್ಟಾಗುತ್ತದೆ. ನನಗೆ ಈಗಲೂ ನೆನಪಿದೆ. ರಾಯಚೂರಿನ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಾಗ, ‘ಪೂಜಾ ಒಳ್ಳೆಯ ಪ್ರಯತ್ನ ಮಾಡಿದ್ದೀರಿ’ ಎಂದು ರಮ್ಯಾ ಹೇಳಿದ್ದರು. ರಮ್ಯಾ ನಿಮ್ಮ ಪ್ರೊಡಕ್ಷನ್ ಕಂಪನಿಗೆ ಶುಭಾವಾಗಲಿ. ನಿಮ್ಮ ಸಂಸ್ಥೆಯಿಂದ ರಾಷ್ಟ್ರಮಟ್ಟದ ಕನ್ನಡ ಸಿನಿಮಾಗಳು ಮೂಡಿಬರಲಿ ಎಂದು ಅವರು ಶುಭಹಾರೈಸಿದ್ದಾರೆ.










