ಕನ್ನಡ ಚಿತ್ರರಂಗದ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ…

75
firstsuddi

ವಿಜಯಪುರ : ಕನ್ನಡ ಚಿತ್ರರಂಗದ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ತಮ್ಮ ಅಳಿಯನ ಪತ್ನಿ ಮೇಲೆ  ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫಯಾಜ್ ಅವರ ಪತ್ನಿ ಸನಾ ಕರಜಗಿ ಮೇಲೆ ತಾಳಿಕೋಟೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಬಲವಂತವಾಗಿ ವಿಷ ಕೂಡ ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸನಾ ಕರಜಗಿ ಅವರ ತಾಯಿ ಫಾತಿಮಾ ಶಿರಹಟ್ಟಿ ವಿಜಯಪುರ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದು, ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ದೂರು ದಾಖಲಾಗಿದೆ.