ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ವಿಧಿವಶ…

97
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ನಿಧನರಾಗಿದ್ದಾರೆ.

ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಎಸ್.ಶಿವರಾಂ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ.

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು.