ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನ…

79
firstsuddi

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೋಹಿತಾಶ್ವ ಅವರು ನಿವೃತ್ತ ಉಪನ್ಯಾಸಕರೂ ರಂಗ ಕಲಾವಿದರೂ ಆಗಿದ್ದಾರೆ. ಡಾ. ರಾಜ್ ಕುಮಾರ್, ಅಂಬರೀಷ್, ವಿಷ್ಣುವರ್ಧನ್, ಶಂಕರ್ನಾಗ್ ಮುಂತಾದವರ ಜೊತೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಲೋಹಿತಾಶ್ವ ಅವರು ತುಮಕೂರಿನ ತೊಂಡಗೆರೆ ಗ್ರಾಮದವರಾಗಿದ್ದು, ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.