ಬೆಂಗಳೂರು : ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಕನ್ನಡ ಶಾಲೆಯೊಂದನ್ನು ದತ್ತು ಪಡೆದಿದ್ದು, ಈ ಮೂಲಕ ಮತ್ತೆ ಸುದ್ದಿಯಾಗಿದೆ.
ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ. ಈ ಶಾಲೆ ಅಂದಾಜು 133 ವರ್ಷಗಳಷ್ಟು ಹಳೆಯದು ಎನ್ನಲಾಗಿದೆ. ಶಾಲೆಗಾಗಿ ನಾವು ನೀವು ಯೋಜನೆ ಅಡಿಯಲ್ಲಿ ಇದನ್ನು ದತ್ತು ಪಡೆಯಲಾಗಿದೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಕೆಲಸಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡಲಿದೆ.
ಈ ಹಿಂದೆ ಕೂಡ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆಲವು ಶಾಲೆಗಳನ್ನು ದತ್ತು ಪಡೆಯಲಾಗಿತ್ತು. ಕಿಚ್ಚ ಸುದೀಪ್ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದೀಗ 133 ವರ್ಷ ಹಳೆಯ ಶಾಲೆಯನ್ನು ದತ್ತು ಪಡೆಯುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.










