ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಒಪ್ಪಿಗೆ : ನಿರ್ಮಲಾ ಸೀತರಾಮನ್…

363
firstsuddi

ನವದೆಹಲಿ : ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಐಬಿಪಿಎಸ್ ಹಾಗೂ ಆರ್​ಆರ್​ಬಿ ನಡೆಸುವ ಪರೀಕ್ಷೆಗಳನ್ನು ಇನ್ನು ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ. ಇದುವರೆಗೂ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಆರ್​ಆರ್​ಬಿಯ ನೇರ ನೇಮಕಾತಿ ಸ್ಕೇಲ್ 1 ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ವಿದ್ಯಾರ್ಥಿಗಳು ತಮ್ಮ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿ ಹೆಚ್ಚು ಜ್ಞಾನ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರಾದೇಶಿಕ ಭಾಷೆಯಲ್ಲಿಯೇ ಆರ್​ಆರ್​ಬಿ, ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ಐಬಿಪಿಎಸ್ ನ ಆರ್​ಆರ್​ಬಿ ಪರೀಕ್ಷೆಗಳ್ನು ಇಂಗ್ಲಿಷ್ ಹಾಗೂ ಹಿಂದಿ ಹೊರತಾಗಿಯೂ ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕೊಂಕಣಿ, ಮಲೆಯಾಳಂ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದು ಭಾಷೆಯಲ್ಲಿ ಬರೆಯಬಹುದು. ಈ ಮೂಲಕ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುತ್ತದೆ. ಹಾಗಾಗಿ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ನಿರ್ಮಲಾ ಸೀತರಾಮನ್ ಅವರು ತಿಳಿಸಿದ್ದಾರೆ.