ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸ್ಥಳದಲ್ಲೇ ಸಾವು…

66
firstsuddi

ಲಕ್ನೋ : ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್ ನಲ್ಲಿ ಇಂದು ನಸುಕಿನ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಆಗ್ರಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್ ಗೆ ಹೋಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.