ಮೈಸೂರು : ಪ್ರೇಮಿಗಳಿಬ್ಬರು ಜಿಲ್ಲೆಯ ನಂಜನಗೂಡು ಬಳಿಯ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಚಾಮರಾಜನಗರದ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಚಾಮರಾಜನಗರದ ಸೋಮವಾರಪೇಟೆ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಬಾಲಕಿಯು ಚಾಮರಾಜನಗರದ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದರೆ, ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.
ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಇಬ್ಬರೂ ಕಪಿಲಾ ನದಿಗೆ ಹಾರಿದ್ದಾರೆ. ಈ ವೇಳೆ ತೆಪ್ಪ ನಡೆಸುತ್ತಿದ್ದ ಅಂಬಿಗರು ಇಬ್ಬರನ್ನೂ ರಕ್ಷಿಸಿದ್ದಾರೆ. ಸದ್ಯ ಇಬ್ಬರಿಗೂ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










