ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ.

73
firstsuddi

ಮೈಸೂರು : ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾಗಿನ ಅರ್ಪಿಸಿದರು.

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಕಬಿನಿಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ. ಈ ಹಿಂದೆಯೂ ಕೂಡ ನೀರಾವರಿ ಸಚಿವನಾಗಿ ಬಾಗಿನ ಅರ್ಪಿಸಿದ್ದೇನೆ. ಕಬಿನಿ ಜಲಾಶಯದ ಮುಂದೆ ಬೃಂದಾವನ ಮಾದರಿ ಮಾಡುವ ಪ್ರಸ್ತಾಪ ಹಿಂದಿನಿಂದಲೂ ಇದೆ. ಅದನ್ನೆಲ್ಲ ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಹೇಳಿದರು.

ಪುನಿತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರಿ ಪ್ರಶಸ್ತಿಗೆ ಶಿಫಾರಸ್ಸು ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಅವರು ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಎಲ್ಲದಕ್ಕೂ ಒಂದು ನಿಯಮ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಎಸ್ ಪಿ ಚೇತನ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.