ಬೆಂಗಳೂರು : ಕಬ್ಜ ಸಿನಿಮಾದ ಚಿತ್ರೀಕರಣ ಸಮಯದಲ್ಲಿ ನಟ ಉಪೇಂದ್ರ ಅವರ ತಲೆಗೆ ಪೆಟ್ಟಾಗಿದೆ. ಮಿನರ್ವ ಮಿಲ್ ನಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಸ್ಟಂಟ್ ಮಾಸ್ಟರ್ ರವಿವರ್ಮ ಮಾರ್ಗದರ್ಶನದಲ್ಲಿ ಚಿತ್ರದ ಫೈಟಿಂಗ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಾಡ್ ನಿಂದ ತಲೆಗೆ ಪೆಟ್ಟು ಬಿದ್ದಿದೆ. ಪೆಟ್ಟಾಗಿದ್ದರೂ ಕೂಡ ಉಪೇಂದ್ರ ಅವರು ಶೂಟಿಂಗ್ ಮುಗಿಸಿ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಖ್ಯಾತ ನಿರ್ದೇಶಕ ಆರ್.ಮಂಜು ಅವರು ‘ಕಬ್ಜ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.










