ಕಮರಿಗೆ ಬಿದ್ದ ಬಸ್ – 25 ಮಂದಿ ಸಾವು…

51
firstsuddi

ಡೆಹ್ರಾಡೊನ್ : ಮದುವೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ 45 ಜನರಿದ್ದ ಬಸ್ಸೊಂದು ದೊಡ್ಡ ಕಮರಿಗೆ ಆಯತಪ್ಪಿ ಬಿದ್ದು 25 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಉತ್ತರಾಖಂಡದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ರಾತ್ರಿ 7.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಈಗಾಗಲೇ 21 ಮಂದಿಯನ್ನು ರಕ್ಷಿಸಲಾಗಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಎನ್​ಡಿಆರ್​ಎಫ್​ ತಂಡ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿಯಾಗಿ ಕತ್ತಲೆ ಆವರಿಸಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಇದುವರೆಗೆ 25 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ದುರಂತದಲ್ಲಿ ಸಾವಿಗೀಡಾದವರಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಗಳೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ.